ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ

(ನ್ಯೂಸ್ ಕಡಬ) newskadaba.com.ಬೆಂಗಳೂರು , ಮೇ.19. ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್ ಹಾಗೂ ದೇಶದ ಹಲವು ಘಟಾನುಘಟಿ ರಾಜಕೀಯ ಮುಖಂಡರು ಹಾಜರಿರುವ ಸಾಧ್ಯತೆ ಇದೆ.

ಸಿದ್ದು ಮತ್ತು ಡಿಕೆ ಇವರಿಬ್ಬರ ಪದಗ್ರಹಣ ಮಾತ್ರ ಬೇಡ, ಇವರೊಂದಿಗೆ ಸಚಿವರು ಪ್ರಮಾಣ ವಚನ ತೆಗೆದುಕೊಳ್ಳಲಿ ಎಂದ ಕಾರಣ ಇವರ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಸುಮಾರು 28 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ ಇದೆ. ಆದ್ರೆ ಎಷ್ಟು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನುವುದೇ ಕೈ ನಾಯಕರು ಗುಟ್ಟಾಗೇ ಇಟ್ಟಿದ್ದಾರೆ. ಸಚಿವ ಸ್ಥಾನಕ್ಕೆ ಕಾಂಗ್ರೆಸ್​ನಲ್ಲಿ 80ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ.

error: Content is protected !!
Scroll to Top