(ನ್ಯೂಸ್ ಕಡಬ)newskadaba.com ಮೈಸೂರು,ಮೇ.19 ಮೈಸೂರಿನ ರಂಗಾಯಣ ರಂಗ ಶಿಕ್ಷಣ ಕೇಂದ್ರದಲ್ಲಿ 10 ತಿಂಗಳ ರಂಗ ಶಿಕ್ಷಣ ಡಿಪ್ಲೋಮಾ ತರಬೇತಿಗೆ ರಂಗಭೂಮಿಯ ಕುರಿತು ಪ್ರಾಥಮಿಕ ಅನುಭವ ಹೊಂದಿರುವ ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರುವ 18ರಿಂದ 28 ವರ್ಷದೊಳಗಿನ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಹಾಗೂ ಐದು ಸಾವಿರ ರೂಪಾಯಿ ವಿದ್ಯಾರ್ಥಿವೇತನ ಪಾವತಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 5, ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.