ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ದುರ್ಮರಣ

 (ನ್ಯೂಸ್ ಕಡಬ) newskadaba.com. ಗುಜರಾತ್‍ನ, ಮೇ.19. ರಸ್ತೆ ಅಪಘಾತದಲ್ಲಿ ಗುಜರಾತ್‍ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಅವರು ದುರ್ಮರಣಕ್ಕಿಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಗುರುವಾರ ರಾತ್ರಿ ತಮ್ಮ ಗ್ರಾಮದಿಂದ ಸಾವರಕುಂಡ್ಲಾಗೆ ಹಿಂತಿರುಗುತ್ತಿದ್ದಾಗ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ ಎಂದು ವಂಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸಿದರು.

ವಲ್ಲಭಭಾಯಿ ವಘಾಸಿಯಾ ಅವರು ನುರಿತ ಸಂಘಟಕರಾಗಿ, ಜನನಾಯಕರಾಗಿ ದುಡಿದು ಅಮ್ರೇಲಿ ಜನತೆಗೆ ಸೇವೆ ಸಲ್ಲಿಸಿದ ನಾಯಕ ನಮ್ಮೊಂದಿಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಾವರಕುಂಡ್ಲದ ಬಿಜೆಪಿ ಶಾಸಕ ಮಹೇಶ ಕಸ್ವಾಳ ಹೇಳಿದ್ದಾರೆ.

Also Read  ಕ್ರೂರವಾಗಿ ಮೂರು ಮೇಕೆಗಳನ್ನು ಬಲಿ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

69 ವರ್ಷದ ವಘಾಸಿಯಾ ಅವರು ಸಾವರಕುಂಡ್ಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕರಾಗಿದ್ದು, ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

error: Content is protected !!
Scroll to Top