ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿಗಟ್ಟಿಸಿ ಕೊಂದು ಆತ್ಮಹತ್ಯೆಯ ಕಥೆ ಕಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌.ಅನಿತಾ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆನಂದ್​ ಕೊಲೆಯಾದವರು.ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲು.

ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರ ಬಾತ್ ರೂಮಿನಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್ ಅವರ ಶವ ಪತ್ತೆಯಾಗಿತ್ತು. ಶವವನ್ನ ಪರಿಶೀಲಿಸಿದ್ದ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಆನಂದ್ ಅವರಿಗೆ ನಿದ್ರೆ ಮಾತ್ರೆ ನೀಡಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆತನ ಪತ್ನಿಯನ್ನ ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯಾಂಶ ಬಯಲಾಗಿದೆ.

Also Read  ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ

 

 

error: Content is protected !!
Scroll to Top