2,000 ರೂ.ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಕ್ಕೆ RBI ಸೂಚನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.20. ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌‌ಬಿಐ) ನಿರ್ಧರಿಸಿದೆ.

ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿದೆ ಎಂದು ಆರ್​ಬಿಐ ಹೇಳಿದೆ. ಇನನು 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದಾಗಿದೆ.

 

error: Content is protected !!
Scroll to Top