ತುಂಬೆ: ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.20. ಸ್ನೇಹಿತನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿದ ಘಟನೆ ತುಂಬೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ತುಂಬೆ ನಿವಾಸಿ ಉಮರ್ ಎಂಬವರ ಪುತ್ರ ಉನೈಸ್ ಎಂಬಾತ ತನ್ನ ಗೆಳೆಯ ಫಯಾಝ್ ಜೊತೆಗೆ ಫರಂಗಿಪೇಟೆಯಿಂದ ತುಂಬೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಹಿಂದಿನಿಂದ ಬಂದ ಇಬ್ಬರು ತಲವಾರು ಬೀಸಿದ್ದು, ಘಟನೆಯಿಂದ ಆಘಾತಕ್ಕೊಳಗಾಗಿರುವ ಉನೈಸ್ ರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲವಾರು ದಾಳಿ ನಡೆಸಿದ ದುಷ್ಕರ್ಮಿಗಳು ಕೂಡಲೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಪೂರ್ವದ್ವೇಷದಿಂದ ಈ ದಾಳಿ ನಡೆದಿದೆ ಎನ್ನಲಾಗಿದೆ.

ಆಸ್ಪತ್ರೆಗೆ ಎಸ್ಪಿ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Scroll to Top