‘ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ’ ?       ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. 2000 ರೂಪಾಯಿ ಮುಖಬೆಲೆ ನೋಟನ್ನು ಹಿಂಪಡೆಯುವುದರ ಬಗ್ಗೆ ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು.

Also Read  ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

 

error: Content is protected !!
Scroll to Top