ಪದಗ್ರಹಣ ಸಮಾರಂಭಕ್ಕೆ ರೈಲಿನಲ್ಲಿ ಆಗಮಿಸಿ, ಸರಳತೆ ಮೆರೆದ ಶಾಸಕ.!

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.20 ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್​ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಈಗಾಗಲೇ ಕಾಂಗ್ರೆಸ್​ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ.

ಇದರ ನಡುವೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್​ ಪುಟ್ಟಣ್ಣಯ್ಯ ಎಲ್ಲರ ಗಮನ ಸೆಳೆದಿದ್ದಾರೆ.ದರ್ಶನ್​ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ.

ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರ ಆಹ್ವಾನ‌ದ ಮೇರೆಗೆ ದರ್ಶನ್​, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದಾರೆ.

Also Read  ➤ ಸುಮಾರು 400 ವರ್ಷ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ.!

error: Content is protected !!
Scroll to Top