ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಮತ್ತೆ ಹಿನ್ನಡೆ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.20 ಕರ್ನಾಟಕದ 108 ಕಿ.ಮೀ. ದಟ್ಟ ಅರಣ್ಯಗಳ ನಡುವೆ ಸಾಗುವ ಪ್ರಸ್ತಾವವಿರುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಮತ್ತೆ ಹಿನ್ನಡೆಯಾಗಿದೆ. ಈಗಿನ ಸ್ವರೂಪದಲ್ಲಿ ಯೋಜನೆಗೆ ಒಪ್ಪಿಗೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ನಿರಾಕರಿಸಿದೆ.

ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವ ಭೂಪೇಂದರ್‌ ಯಾದವ್‌ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಯೋಜನೆಯ ಸಾಧಕ-ಬಾಧಕಗಳ ಕುರಿತು ವಿಸ್ತೃತ ಚರ್ಚೆ ನಡೆದಿದೆ.

Also Read  ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ ➤ ಶೂಟಿಂಗ್ ವೇಳೆ ಅವಘಡ

 

 

error: Content is protected !!
Scroll to Top