ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.


ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಟ ಕಮಲ್ ಹಾಸನ್, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ. ಕಾರ್ಯಕ್ರಮಕ್ಕೆ 1,800 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

Also Read  ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು

error: Content is protected !!
Scroll to Top