ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕರ್ನಾಟಕದ ಉಪಮುಖ್ಯ ಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಮಾಜಿ ಸಂಸದೆ ರಮ್ಯ, ಸೇರಿದಂತೆ ಕಾಂಗ್ರೆಸ್‌ ಶಾಸಕರು, ಸಾವಿರಾರು ಜನತೆ ಆಗಮಿಸಿದ್ದರು. ಸಮಾರಂಭ ಮುಗಿದ ಬಳಿಕ ಕ್ಯಾಬಿನೆಟ್‌ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ ಐದು ಗ್ಯಾರಂಟಿಗಳ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.

Also Read  ಬಾಜಿನಡ್ಕ-ಕರಿಂಬಿ-ಬನ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

error: Content is protected !!
Scroll to Top