ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಾರಾ ಮೆರುಗು ನೀಡಿದ ಗಣ್ಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸುವ ಮೂಲಕ ತಾರಾ ಮೆರುಗು ನೀಡಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರು ಪಾಲ್ಗೊಂಡಿದ್ದರು.

ನಟ ಶಿವರಾಜ್ ಕುಮಾರ್, ತಮಿಳಿನ ಖ್ಯಾತ ನಟ ಕಮಲ್ ಹಾಸನ್, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ಸಾಧು ಕೋಕಿಲಾ, ದುನಿಯಾ ವಿಜಯ್, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

Also Read  ಪ್ರಯಾಣಿಕರ ಗಮನಕ್ಕೆ; ಕುಕ್ಕೇ ಸುಬ್ರಹ್ಮಣ್ಯ- ಯಶವಂತಪುರ ರೈಲು ವೇಳಾಪಟ್ಟಿಯಲ್ಲಿ ಪರಿಷ್ಕರಣೆ

 

error: Content is protected !!
Scroll to Top