ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ➤ ಕಡಬದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಾಹನ ರ್ಯಾಲಿ, ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.22. ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮರ್ಧಾಳದಿಂದ ಕಡಬದವರೆಗೆ ವಾಹನ ರ್ಯಾಲಿ ನಡೆಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈಝಲ್ ಕಡಬ ನೇತೃತ್ವದಲ್ಲಿ ಶನಿವಾರ ಸಂಜೆ ಮರ್ಧಾಳದಿಂದ ಕಡಬದ ಮುಖ್ಯ ರಸ್ತೆಯ ಮೂಲಕ ಕಡಬ ಮಿನಿ ವಿಧಾನಸೌಧದ ವರೆಗೆ ರ್ಯಾಲಿ ನಡೆಯಿತು. ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Also Read  ಅರಂತೋಡು: ಗುಡ್ಡ ಕುಸಿತ ➤ ರಸ್ತೆ ಸಂಚಾರ ಬಂದ್...!

error: Content is protected !!
Scroll to Top