ಮೇ.24ರಂದು ಕಾಂಗ್ರೆಸ್‌ ನಾಯಕರ ವಿಶೇಷ ಸಭೆ     

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ,ಮೇ.22 ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಚರ್ಚಿಸಲು ಮೇ 24ರಂದು ಕಾಂಗ್ರೆಸ್‌ ವಿಶೇಷ ಸಭೆಯನ್ನು ಕರೆದಿದೆ.

ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಈ ವರ್ಷ ವಿಧಾನಸಭೆ ಚುನಾವಣೆಗಳು ನಡೆಯಲಿವೆ.ಈ ಹಿನ್ನೆಲೆಯಲ್ಲಿ ಚುನಾವಣೆ ರೂಪುರೇಷೆ ಕುರಿತು ಚರ್ಚಿಸಲು ಕಾಂಗ್ರೆಸ್‌ ವಿಶೇಷ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ ಗಢದ ಕಾಂಗ್ರೆಸ್‌ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Also Read  ಏಕಕಾಲಕ್ಕೆ 2 ಕೈಯಲ್ಲಿ ಬರೆದು ದಾಖಲೆ ನಿರ್ಮಿಸಿದ ಆದಿ ಸ್ವರೂಪಾ!

 

 

error: Content is protected !!