ಮಂಗಳೂರು ಭೀಕರ ವಿಮಾನ ದುರಂತಕ್ಕೆ 13 ವರ್ಷ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷವಾಗುತ್ತಿದೆ.

2010ರ ಮೇ22ರ ಬೆಳಗ್ಗೆ 6.20ಕ್ಕೆ ದುಬೈ ಯಿಂದ ಬಂದ ಏರ್‌ ಇಂಡಿಯಾ ವಿಮಾನ ಲ್ಯಾಂಡಿಂಗ್‌ ವೇಳೆ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿ 158 ಮಂದಿ ಮೃತಪಟ್ಟಿದ್ದರು. ದುರಂತದಲ್ಲಿ ಮಡಿದವರ ಹಲವರ ಕುಟುಂಬಕ್ಕೆ ಈಗಲೂ ಪರಿಹಾರ ಧನ ಸಿಗಲಿಲ್ಲ ಎಂಬುದು ಅಷ್ಟೇ ಬೇಸರದ ಸಂಗತಿ.

8 ಮಂದಿ ಪವಾಡಸದೃಶವಾಗಿ ಬದುಕುಳಿದಿದ್ದರು. ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ಸ್ಮರಣಾರ್ಥ ನಿರ್ಮಿಸಿದ ಪಾರ್ಕ್‌ನಲ್ಲಿ ಜಿಲ್ಲಾಡಳಿತದಿಂದ ಇಂದು ಬೆಳಗ್ಗೆ 9ಕ್ಕೆ ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

Also Read  ಜಿಲ್ಲಾ ಉಸ್ತುವಾರಿ ಸಚಿವರ ದ.ಕ. ಜಿಲ್ಲಾ ಪ್ರವಾಸ

 

 

error: Content is protected !!
Scroll to Top