ಜೀರೋ ಟ್ರಾಫಿಕ್ ಸೌಲಭ್ಯ ಬೇಡ.! ➤ ಸಿಎಂ ಸಿದ್ಧರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22 ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ ಅವರು ಸಾರ್ವಜನಿಕರಿಗೆ ಇಷ್ಟವಾಗುವಂತ ತೀರ್ಮಾನವನ್ನು ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗುವಂತ ಜೀರೋ ಟ್ರಾಫಿಕ್ ಸೌಲಭ್ಯ ಬೇಡ.ಅದನ್ನು ವಾಪಾಸ್ಸು ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

Also Read  ಮೇ 24ರಿಂದ ಜೂನ್.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ➤ ವೇಳಾಪಟ್ಟಿ ಬಿಡುಗಡೆ

 

 

error: Content is protected !!
Scroll to Top