(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ಮಂಗಳೂರಿನ ಯುವತಿಯೊಬ್ಬಳು ತನ್ನ 21ನೇ ವಯಸ್ಸಿಗೆ ಪೈಲೆಟ್ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಮಂಗಳೂರಿನ ಪಾಂಡೇಶ್ವರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ನಾಝಿಯಾ ದಂಪತಿಯ ಪುತಿಯಾದ ಹನಿಯಾ ಹನೀಫ್ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದು ಅಧಿಕೃತ ಪೈಲಟ್ ಆಗಿದ್ದಾರೆ.