ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.22. ಮಾಜಿ ಶಾಸಕ, ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ‌(71) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.


ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಸಭಾಪತಿ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.
1952 ರಲ್ಲಿ ಹುಟ್ಟಿದ ಅವರು, 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಆ ಬಳಿಕ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

Also Read  ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ

error: Content is protected !!
Scroll to Top