ಬೆಳ್ತಂಗಡಿ: ಸೂಪರ್‌ ಮಾರ್ಕೆಟ್‌ನಲ್ಲಿ ಆಕಸ್ಮಿಕ ಬೆಂಕಿ    ➤ ಲಕ್ಷಾಂತರ ಮೌಲ್ಯದ ವಸ್ತು ನಾಶ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.22. ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್‌‌ನಲ್ಲಿ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂದಾಜು ಸುಮಾರು 50 ಲಕ್ಷದಷ್ಟು ನಷ್ಟ ಉಂಟಾಗಿರುವ ಘಟನೆ ನಡೆದಿದೆ.

ಪತ್ರಿಕಾ ವಿತರಣೆ ಮಾಡುವವರು ಘಟನೆ ಗಮನಕ್ಕೆ ಬಂದು ತಕ್ಷಣ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳೀಯರು ಹಾಗೂ ಅಗ್ನಿಶಾಮಕದ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಬೆಂಕಿ ಸಂಪೂರ್ಣ ತಗುಲಿದ್ದರಿಂದ ಮಾಲಕರು ಸಂಪೂರ್ಣ ನಷ್ಟ ಅನುಭವಿಸಿದ್ದಾರೆ.

Also Read  ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು

 

error: Content is protected !!
Scroll to Top