ಮೇ.22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ➤144 ಸೆಕ್ಷನ್ ಜಾರಿ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22 ದಿನಾಂಕ 22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಾಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದು, ಇಂದಿನಿಂದ ಮೇ.24ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯಲಿದೆ.

ಈ ಸಮಯದ್ಲಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧಕ್ಕೆ ಮುತ್ತಿಗೆ ಸೇರಿದಂತೆ ವಿವಿಧ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ.

Also Read  ಕನ್ನಡ ಸಾಹಿತ್ಯಕ್ಕೆ ಖಿದ್ಮಾ ಸೇವೆ ಅಪಾರ ➤ ಡಾ. ಬಸವರಾಜ್ ಪೂಜಾರ

 

 

 

 

error: Content is protected !!
Scroll to Top