ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಹಾರ ಮೂಲದ ಡಾ.ಅಲೋಕ್ ಮೋಹನ್ ಅವರು 1987 ರ ಬ್ಯಾಚ್ ನ ಹಿರಿಯ IPS ಅಧಿಕಾರಿಯಾಗಿದ್ದಾರೆ. ಅವರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.

 

error: Content is protected !!

Join the Group

Join WhatsApp Group