(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್ಪಾಸ್ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.