ಕಾರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಬೊಲೆರೋ ➤ ಆರು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com.ಕಾರ್ಕಳ, ಮೇ.22. ತೀರ್ಥಯಾತ್ರೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ಬೆಳಗಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ನಿನ್ನೆ ಸುರಿದ ಮಳೆಯಿಂದಾಗಿ ವಾಹನ ನಿಯಂತ್ರಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

Scroll to Top