ಬೆಂಗಳೂರು ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.22. ಟೆಕ್ಕಿ ಯುವತಿ ನೀರಲ್ಲಿ ಮುಳುಗಿ, ಮೃತಪಟ್ಟ ಬೆನ್ನಲ್ಲೇ, ಮತ್ತೋರ್ವ ಯುವಕ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ 31 ವರ್ಷದ ಯುವಕ ಲೋಕೇಶ್ ರಾಜಕಾಲುವೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದು, ಇಂದು ಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೆಪಿ ಅಗ್ರಹಾರದಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದ್ದು, ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದಾಗಿ‌ಈ ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.

Also Read  ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೆಂಗಳೂರಿನಲ್ಲಿ ಅನಾಹುತವೇ ನಡೆದಿದ್ದು, ಟೆಕ್ಕಿ ಯುವತಿ ನೀರಲ್ಲಿ ಮುಳುಗಿ, ಮೃತಪಟ್ಟ ಬೆನ್ನಲ್ಲೇ, ಮತ್ತೋರ್ವ ಯುವಕ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

error: Content is protected !!