ಮೇ.23 ರಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.ವಿದ್ಯಾರ್ಥಿಗಳು ಪರೀಕ್ಷಾ ವಲಯಗಳಲ್ಲಿ ನಿಯಮ ಪಾಲನೆ ಮಾಡುವುದು ಕಡ್ಡಾಯವಾವಾಗಿದೆ.

 ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

Also Read  ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್

 

error: Content is protected !!
Scroll to Top