ವಿದ್ಯಾರ್ಥಿಯನ್ನು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಸಿಬ್ಬಂದಿ ➤ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ವಿದ್ಯಾರ್ಥಿಯೊಬ್ಬ ಸಿಇಟಿ ಪರೀಕ್ಷೆ ಬರೆಯಲು ಹೋಗಬೇಕಿತ್ತು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದ್ದಿದ್ದರಿಂದ ನಗರದಲ್ಲಿ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಿದ್ಯಾರ್ಥಿ ಮನನೊಂದಿದ್ದ.

ಈ ವಿಧ್ಯಾರ್ಥಿಯನ್ನು ನಗರದ ಪೊಲೀಸ್​ ಸಿಬ್ಬಂದಿ  ಹೊಯ್ಸಳ ವಾಹನದಲ್ಲಿ  ಸೈರನ್ ಹಾಕಿಕೊಂಡು ಸಕಾಲಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಕೊತ್ತನೂರಿನ ಹೊಯ್ಸಳ ಸಿಬ್ಬಂದಿ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Also Read  ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ

 

error: Content is protected !!
Scroll to Top