ರಾಜ್ಯದಲ್ಲಿ ಪೂರ್ವ ಮುಂಗಾರು ➤ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿರುವ ಸಿಎಂ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.23. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲು ವಿಶೇಷ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.

error: Content is protected !!
Scroll to Top