ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಆ ಬಳಿಕ, ಮಳೆ ಜೋರಾಗಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Also Read  ಬಿ.ಸಿ.ರೋಡ್: ನಿಷೇಧಾಜ್ಞೆ ನಡುವೆ ಪ್ರತಿಭಟನೆ ► ಸಂಸದರು, ಶಾಸಕರು ಸೇರಿದಂತೆ ಸಂಘಟನೆಯ ಮುಖಂಡರ ಬಂಧನ

 

error: Content is protected !!
Scroll to Top