ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com.ಮಂಗಳೂರು, ಮೇ.23. ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆ ಮಳೆಗಾಲ ಆರಂಭವಾಗುವ ಎರಡು ತಿಂಗಳ ಮೊದಲೇ ಪೂರ್ಣಗೊಂಡಿದ್ದು, ಅಕ್ಟೋಬರ್‌ 15ರವರೆಗೆ ಮರಳುಗಾರಿಕೆ ನಿಷೇಧ ಜಾರಿಮಾಡಲಾಗಿದೆ.

ಪರವಾನಿಗೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾ. 4ಕ್ಕೇ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಣ್ಣೆಗಳಲ್ಲಿ ಮರಳುಗಾರಿಕೆ ನಿಂತಿದ್ದು, ಆ ಬಳಿಕ ಪರಿಸರ ಕ್ಲಿಯರೆನ್ಸ್‌ ಮತ್ತೆ ಪಡೆಯುವುದಕ್ಕೆ ಬೇಕಾದ ಬೆಥಮೆಟ್ರಿ ಸರ್ವೇ ಪೂರ್ಣಗೊಂಡಿದ್ದು, ಆದರೆ ವರದಿ ಬರಲು ಬಾಕಿ ಇದೆ. ಅಲ್ಲದೆ ಈ ಮಧ್ಯೆ ಚುನಾವಣ ಪ್ರಕ್ರಿಯೆಯೂ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯೂ ಸಭೆ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

Scroll to Top