ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.23. ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಗುರುವಾಯನಕೆರೆ ಎಂಬಲ್ಲಿ ನಡೆದಿದೆ.

ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಾಲಾ ಬಸ್ ಬೆಳ್ತಂಗಡಿಯಿಂದ ಮದಡ್ಕ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ಯೋಗೀಶ್ ಪೂಜಾರಿ ಅವರಿಗೆ ಡಿಕ್ಕಿ ಹೊಡೆದು ಅವರ ಕಾಲಿನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಯೋಗೀಶ್ ರವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

Scroll to Top