ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ಆಗಿ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಕೂಡಲೇ ಅವರನ್ನು ಫಳ್ನೀರಿನ ಅಥೆನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಹೆಚ್ಚಿನವರು ಕೇರಳದ ವಿದ್ಯಾರ್ಥಿನಿಯರಾಗಿದ್ದು, ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎನ್ನುವ ಮಾಹಿತಿ ವಿದ್ಯಾರ್ಥಿನಿಯರ ಹೆತ್ತವರ ಕಡೆಯಿಂದ ಬಂದಿದೆ. ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಬೆಳಗ್ಗಿನ ಹೊತ್ತಿಗೆ ಮರಳಿ ಹಾಸ್ಟೆಲ್ ಗೆ ರವಾನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Also Read  ಕಡಬ: ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಜಿಲ್ಲಾಧ್ಯಕ್ಷರಾಗಿ ಶಶಿಧರ ಬೊಟ್ಟಡ್ಕ ಆಯ್ಕೆ

error: Content is protected !!
Scroll to Top