(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.18. ಸುಮಾರು ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಾಸನದ ಉಮೇಶ್(30) ಎಂದು ಗುರುತಿಸಲಾಗಿದೆ. ಶಿರಾಡಿ ಗ್ರಾಮದ ಗುಂಡ್ಯದ ಐದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆಹಚ್ಚಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಗೋಪಾಲ ನಾಯ್ಕ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪ ನಿರೀಕ್ಷಕ ನಂದಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಸಿಬ್ಬಂದಿಗಳಾದ ಹರೀಶ್ಚಂದ್ರ ಹಾಗೂ ಪ್ರವೀಣ್ ರೈ ಭಾಗವಹಿಸಿದ್ದರು.