ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ

(ನ್ಯೂಸ್ ಕಡಬ)newskadaba.com ತುಮಕೂರು, ಮೇ.23. ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ.


ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು. ಮಕ್ಕಳು ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ. ನಾಪತ್ತೆಯಾಗಿರುವ ಎಲ್ಲ ಮಕ್ಕಳು 15-16 ವರ್ಷದ ವಯಸ್ಸಿನವರಾಗಿದ್ದಾರೆ. 4 ಮಕ್ಕಳು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ.

 

Also Read  ರಾಜ್ಯದಲ್ಲಿ ಇಂದು 34 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

error: Content is protected !!
Scroll to Top