(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಫೈನಲ್ ಮಾಡಿದೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಹೇಳಿದ್ದಾರೆ ಎನ್ನಲಾಗಿದೆ.