ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ಅವರು ಶ್ರೀಶಂಕರ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಗುರುವಾರ ಇಹಲೋಕ ತ್ಯಜಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಶೀನಾಥ್ ಅವರನ್ನು 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ, ಸಂಗೀತ ನಿರ್ದೇಶಕ ವಿ.ಮನೋಹರ್‌, ನಿರ್ದೇಶಕ ಸುನೀಲ್‌ ಕುಮಾರ್‌ ದೇಸಾಯಿ ಸೇರಿದಂತೆ ಅನೇಕರನ್ನು ಕಾಶೀನಾಥ್ ಚಿತ್ರರಂಗಕ್ಕೆ ಕರೆತಂದಿದ್ದಾರೆ. ಕಾಶಿನಾಥ್‌ ಅವರ ನಿಧನದ ವಾರ್ತೆ ತಿಳಿದು ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ.

Also Read  ಹಲವು ದಶಕಗಳ ಬೇಡಿಕೆ ಈಡೇರಿಕೆಗೆ ಹಸಿರು ನಿಶಾನೆ ► ಆಗಸ್ಟ್ 15 ರಂದು ನೂತನ ಕಡಬ ತಾಲೂಕು ಉದ್ಘಾಟನೆ

error: Content is protected !!
Scroll to Top