ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ .!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ  ಬಿಡುಗಡೆಯ ಭಾಗ್ಯ ಸಿಕ್ಕಿತು.ಸನ್ನಡತೆ ಆಧಾರದಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರವು ಆದೇಶಿಸಿತ್ತು.  ಪರಪ್ಪನ ಅಗ್ರಹಾರ ಜೈಲಿನಿಂದಲೂ ಕೈದಿಗಳು ಬಂಧಮುಕ್ತರಾದರು.

ಪರಪ್ಪನ ಅಗ್ರಹಾರದಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ ಒಟ್ಟು 79 ಮಂದಿಗೆ ಬಿಡುಗಡೆ ಮಾಡಲಾಯಿತು. ಅನಾರೋಗ್ಯದ ಚಿಕಿತ್ಸೆಗೆಂದು ಮೈಸೂರು ಹಾಗೂ ವಿಜಯಪುರದ ತಲಾ ಒಬ್ಬರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆ ತರಲಾಗಿತ್ತು. ಅವರಿಬ್ಬರೂ ಸೇರಿ ಒಟ್ಟು 81 ಕೈದಿಗಳನ್ನು ಬಿಡುಗಡೆ ಮಾಡಲಾಯಿತು.

Also Read  ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ

 

error: Content is protected !!
Scroll to Top