ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.24. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ.

ಶರೀಪುದ್ದೀನ್(19) ಮೃತ ಯುವಕ.  ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ. ಯುವಕ  ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಬಾಲಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ  ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

Also Read  ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಹತ್ಯೆ  ➤ ನಾಲ್ವರನ್ನು ಬಂಧಿಸಿದ ಪೊಲೀಸ್ ಇಲಾಖೆ

error: Content is protected !!
Scroll to Top