ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಚುನಾವಣೆಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್​ ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸತತ ಎರಡು ಸೋಲುಗಳಿಂದ ಕಂಗಾಲಾಗಿರುವ ನಿಖಿಲ್​ ಕುಮಾರಸ್ವಾಮಿ ಇದೀಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಚಿಂತನೆಯಲ್ಲಿದ್ದಾರೆ.

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಸಹ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ.

Also Read  ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ

 

error: Content is protected !!
Scroll to Top