(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.24. ಪೊಲೀಸ್ ದೌರ್ಜನ್ಯ ಸಂದರ್ಭ ಅವಿನಾಶ್ ಎಂಬ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಬಿದ್ದಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿ ಡಿವೈಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂದು ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ಡಿವೈಎಸ್ಪಿ ಕಚೇರಿಯಲ್ಲೇ ತೀವ್ರ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.