(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.24. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಅಭ್ಯರ್ಥಿ ಪರ ಬೆಳ್ತಂಗಡಿಯಲ್ಲಿ ಪ್ರಚಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿ ಸಿದ್ದರಾಮಯ್ಯನವರ ಮೇಲೆ ಕೊಲೆ ಆರೋಪ ಹೊರಿಸಿ ನಾಲಿಗೆ ಹರಿಯಬಿಟ್ಟಿದ್ದಾರೆ.