(ನ್ಯೂಸ್ ಕಡಬ)newskadaba.com ಕುಣಿಗಲ್,ಮೇ.25 ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಅಪಘಾತದ ಪರಿಣಾಮ ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿ ಟಿಟಿ ಚಾಲಕ ವೀರೇಶ್ (30), ಶಶಿಕಲಾ (69) ಮೃತಪಟ್ಟವರಾಗಿದ್ದು, ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಗಾಯಗೊಂಡಿದ್ದಾರೆ. ಇವರುಗಳು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.