7 ನೇ ತರಗತಿ ಬಾಲಕಿ ಮೇಲೆ ಅಪ್ರಾಪ್ತ ವಿದ್ಯಾರ್ಥಿಗಳಿಂದ ಗ್ಯಾಂಗ್‌ ರೇಪ್.!

(ನ್ಯೂಸ್ ಕಡಬ)newskadaba.com ಚಂಡೀಗಢ,ಮೇ.25 11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿರೋ‌ ಆಘಾತಕಾರಿ ಘಟನೆ ಚಂಡೀಗಢದಲ್ಲಿ ನಡೆದಿದೆ. ಸಂತ್ರಸ್ತೆ 7 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಶಂಕಿತರಲ್ಲಿ ಒಬ್ಬ ಆಕೆಯ ಸಹಪಾಠಿ. ಉಳಿದ ಮೂವರು ಆರೋಪಿಗಳು ಸರ್ಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು.

ಆರೋಪಿಗಳು ಸಂತ್ರಸ್ತೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯಿಂದ ಹುಡುಗಿ ಆಘಾತಕ್ಕೆ ಒಳಗಾಗಿದ್ದಳು. ಒಂದು ದಿನ ತನ್ನ ತಾಯಿಗೆ ಘಟನೆಯನ್ನು ಬಹಿರಂಗಪಡಿಸಿದ್ದಳು. ಸಂತ್ರಸ್ತೆಯ ತಾಯಿ ತರಗತಿ ಶಿಕ್ಷಕರನ್ನು ಭೇಟಿಯಾಗಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದರು.

Also Read  ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್

ಅದರಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ) ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ನಾಲ್ವರು ಶಂಕಿತರನ್ನು ಬಂಧಿಸಲಾಗಿದ್ದು, ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

 

 

 

error: Content is protected !!
Scroll to Top