ಕಡಬ: ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಉದ್ಯಮಿಯೋರ್ವರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಅಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರಿನ ದುರ್ಗಾಂಬಾ ಜನರಲ್ ಸ್ಟೋರ್ ನ ಮಾಲಕ, ಮೂರ್ತೆದಾರದ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಚಂದ್ರಶೇಖರ ಪೂಜಾರಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಅವರು ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರನ್ನು ನಿಲ್ಲಿಸಿ ನಂತರ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top