ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26 ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದ್ದು, ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ ಮನವಿ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Also Read  ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ಪದವೀಧರರಿಗೆ ಅವಕಾಶ

 

 

 

error: Content is protected !!
Scroll to Top