ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಟೇಕ್ ಆಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 8:30ಕ್ಕೆ ಹೊರಟಿತ್ತು, ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೇಯಲ್ಲಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ.


ಬಳಿಕ ಯಾಣಿಕರನ್ನು ಇಳಿಸಿ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ತೆರಳಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ.

error: Content is protected !!
Scroll to Top