ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.26. ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸೊಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ ಎನ್ನಲಾಗಿದೆ.

ಕೋಟ ಪೊಲೀಸರು ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಮೂವರನ್ನು ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಕಂಡು ಬೈಕ್ ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಮೇ.24ರಂದು ಕಾಂಗ್ರೆಸ್‌ ನಾಯಕರ ವಿಶೇಷ ಸಭೆ     

error: Content is protected !!
Scroll to Top