ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ ➤ ಸುಪ್ರೀಂನಲ್ಲಿ PIL ಸಲ್ಲಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.26. ನೂತನ ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಕಾಂಗ್ರೆಸ್‌, ಟಿಎಂಸಿ, ಆಪ್‌, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ ಬೆನ್ನಲ್ಲೇ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.


ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಮನವಿ ಮಾಡಲಾಗಿದೆ. ಲೋಕಸಭಾ ಸಚಿವಾಲಯ, ಗೃಹ ಸಚಿವಾಲಯ, ಕಾನೂನು ಸಚಿವಾಲಯಗಳನ್ನು ಅರ್ಜಿದಾರರು ಈ ಪ್ರಕರಣದಲ್ಲಿ ಪಾರ್ಟಿ ಮಾಡಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ.

Also Read  ಸಹೋದ್ಯೋಗಿಯ ಮೇಲೆಯೇ ಅತ್ಯಾಚಾರಗೈದ ಪೊಲೀಸ್...!

error: Content is protected !!
Scroll to Top