ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣ ➤ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಕಟೀಲ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ.

ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಹೇಂದ್ರರನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳೂರಿಗೆ ಶಿಫ್ಟ್ ಆಗುತ್ತಿದ್ದಂತೆಯೇ ನಳಿನ್ ಕುಮಾರ್ ಕಟೀಲ್ ಅವರು ಗಾಯಾಳು ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದ್ದಾರೆ. ಇನ್ನು ಸುದ್ದಿ ತಿಳಿದು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ರಾಜೇಶ್ ನಾಯ್ಕ್ ಕೂಡ ಕಟೀಲ್ ಗೆ ಸಾಥ್ ನೀಡಿದರುಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಶಂಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡದಿಂದ ದಾಳಿ ನಡೆದಿರುವ ಮಾಹಿತಿ ಸಿಕ್ಕಿತ್ತು. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿಯಾಗಿತ್ತು ಎಂದು ವರದಿ ತಿಳಿಸಿದೆ.

Also Read  ಮಣಿಪುರದ ಸಿಎಂ ಬಿರೇನ್‌ ಸಿಂಗ್‌ ಕಾರ್ಯಕ್ರಮದ ಸ್ಥಳಕ್ಕೆ ಗುಂಪು ದಾಳಿ      ➤ ಬೆಂಕಿ ಹಚ್ಚಿ ಧ್ವಂಸ

 

error: Content is protected !!
Scroll to Top