(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.26. ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಸ್ಪೀಕರ್ ಯುಟಿ ಖಾದರ್ ಆಗಮಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕ್ಷೇತ್ರದ ಜನರು ಗೌರವದಿಂದ ಸ್ವಾಗತವನ್ನು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.
ಮಂಗಳೂರಿನಲ್ಲಿ ಕ್ಷೇತ್ರದ ಜನರನ್ನು ಮತ್ತು ಅಭಿಮಾನಿಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಸ್ಪೀಕರ್ ಆದರೆ ಜನರ ಸಂಪರ್ಕಕ್ಕೆ ಅಡ್ಡಿ ಇಲ್ಲ, ತಾನು ಸ್ಪೀಕರ್ ಆಗಿದ್ದರೂ, ಜನ ಸಾಮಾನ್ಯರಿಗೆ ಮತ್ತು ತಮ್ಮ ಕ್ಷೇತ್ರದ ಜನತೆಗೆ ತಮ್ಮನ್ನು ಸಂಪರ್ಕಿಸಲು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.