ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.26. ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.


ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ ಟಿಪ್ಪರ್ ವಾಹನದ ಚಾಲಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top